ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
Advertisement
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: Cyclone Michaung ರೌದ್ರಾವತಾರಕ್ಕೆ ಚೆನ್ನೈನಲ್ಲಿ ಐವರು ಬಲಿ; ಶಾಲಾ-ಕಾಲೇಜುಗಳಿಗೆ ರಜೆ
Advertisement
Advertisement
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ