ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಶಾಕ್ – ರಾಜ್ಯದ 30 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

Public TV
1 Min Read
lokayukta raid in bengaluru

ಬೆಂಗಳೂರು: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ 30 ಕಡೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ದಾಳಿ ನಡೆಸಿದ್ದಾರೆ.

ಇಬ್ಬರು ಲೋಕಾಯುಕ್ತ ಎಸ್‌ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಾಜ್ಯದ ಒಟ್ಟು 12 ಕೇಸ್‌ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ. ರಾಜ್ಯದ 30 ಕಡೆಗಳಲ್ಲಿ ಒಟ್ಟು ನೂರಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ನಿರಂತರ ಮಳೆ – ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು, 3 ಮಂದಿ ಗಂಭೀರ

Karnataka Lokayukta

ತುಮಕೂರಿನ ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಬಲವಂತ್ ರಾಥೋಡ್, ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ.ರಾಜಾ, ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್.

ಬೆಂಗಳೂರು ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅಖ್ತಾರ್ ಅಲಿ, ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಎಸ್.ನಾಗೇಶ್, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯದ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್, ಬೆಂಗಳೂರು ಉತ್ತರ ಉಪವಿಭಾಗದ ಎಫ್‌ಡಿಎ ಟಿ.ಆರ್. ಮಂಜುನಾಥ್ ಮನೆಗಳ ಮೇಲೆ ದಾಳಿ ನಡೆದಿದೆ. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲೂ ಮಳೆಯಬ್ಬರ; ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್

Share This Article