ದಾವಣಗರೆ: ಶಾಸಕ ಮಾಡಾಳು ವಿರೂಪಾಕ್ಷಪ್ಪ (Madal Virupakshappa) ಚನ್ನಗಿರಿ ಮನೆಯ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ (Lokayukta) ಅಧಿಕಾರಿಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮಾಡಾಳು ಕುಟುಂಬಸ್ಥರು ಖತರ್ನಾಕ್ ಪ್ಲಾನ್ ಮಾಡಿದ್ದಾರೆ.
Advertisement
ಹೌದು. ಲೋಕಾಯುಕ್ತ ಅಧಿಕಾರಿಗಳು ಬರುತ್ತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕುಟುಂಬಸ್ಥರು ಮನೆಯ ಸಿಸಿಟಿವಿ ಆಫ್ ಮಾಡಿದ್ದರು. ಅಲ್ಲದೆ ಸಿಸಿಟಿವಿ ಆಫ್ ಮಾಡಿ ಹಣ ಸಾಗಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದಾರೆ.
Advertisement
Advertisement
ಚನ್ನಗಿರಿ ಮನೆಯಲ್ಲಿ ಅಲ್ಪ ಪ್ರಮಾಣದ ಹಣ ಮತ್ತು ಚಿನ್ನಾಭರಣ ಮಾತ್ರ ಪತ್ತೆಯಾಗಿದೆ. ಇನ್ನೂ 16 ಲಕ್ಷದ 47 ಸಾವಿರ ಹಣವನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪುತ್ರ ಸಿಕ್ಕಿಬಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ನಾಪತ್ತೆ
Advertisement
ಶಾಸಕರು ನಾಪತ್ತೆ: ಇತ್ತ ಲೋಕಾಯುಕ್ತ ಅಧಿಕಾರಿಗಳ ಪುತ್ರ ಬಲೆಗೆ ಬೀಳುತ್ತಿದ್ದಂತೆಯೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಶಾಸಕರ ದಾವಣಗೆರೆಯ ಮನೆ ಮೇಲೂ ರೇಡ್- ಇಂದು ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ
ಲೋಕಾಯುಕ್ತ ದಾಳಿ ವೇಳೆ 40 ಲಕ್ಷ ಪಂಚ ಪಡೆಯುವಾಗ ಹಾಗೂ ಅಪಾರ ಪ್ರಮಾಣದ ನಗದು ಸಿಕ್ಕ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎಫ್‍ಐಆರ್ ನಲ್ಲಿ A1 ಆರೋಪಿ. ಹೀಗಾಗಿ ಬಂಧನ ಭೀತಿ ಹಿನ್ನೆಲೆಯಲ್ಲಿ ಶಾಸಕರು ಅಜ್ಞಾತ ಸ್ಥಳದಲ್ಲಿದ್ದು, ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ತಜ್ಞರಿಂದ ಅಜ್ಞಾತ ಸ್ಥಳದಿಂದ ಮಾಡಾಳ್ ವಿರೂಪಾಕ್ಷಪ್ಪ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.