ಬೆಂಗಳೂರು: ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
Advertisement
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಮಗನ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿಹೋಯ್ತು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ತಿಳಿಸಿದರು.
Advertisement
Advertisement
ಇದೇ ವೇಳೆ ಡಿಕೆಶಿ (D K Shivakumar) ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಅವರ ಕಾಲದ ಹಗರಣಗಳನ್ನ ತನಿಖೆ ಮಾಡಲಿ. ಲೋಕಾಯುಕ್ತ ಇರೋದೇ ಭ್ರಷ್ಟಾಚಾರ ನಿಯಂತ್ರಣ ಮಾಡೋಕೆ. ಯಾವ್ಯಾವ ಹಗರಣ ಇದೆ ಎಲ್ಲಾ ತನಿಖೆಯಾಗುತ್ತೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದರು. ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ!
Advertisement
ಡಿಕೆಶಿ ಹೇಳಿದ್ದೇನು…?: ಲೋಕಾ ರೇಡ್ ಬೆನ್ನಲ್ಲೆ ಸರ್ಕಾರದ ವಿರುದ್ದ ಕಾಂಗ್ರೆಸ್ ಮುಗಿಬಿದ್ದಿದೆ. ಸರ್ಕಾರದ ವಿರುದ್ಧ ಸಿಡಿದೆದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇಷ್ಟು ದಿನ ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳ್ತಿದ್ರು. ಈಗ ಲೋಕಾಯುಕ್ತದವರೇ ಕೊಟ್ಟಿದ್ದಾರೆ ತಗೊಳ್ಳಿ. ಈಗ ರಾಜೀನಾಮೆ ಕೋಡೋರು ಯಾರು..? ಸಿಎಂ ರಾಜೀನಾಮೆ ಕೊಡ್ತಾರಾ.. ಸಚಿವರು ಕೊಡ್ತಾರಾ? ನಿಗಮ ಮಂಡಳಿ ಅಧ್ಯಕ್ಷರು ರಾಜೀನಾಮೆ ಕೊಡ್ತಾರಾ..? ಅಂತ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ 40% ಕಮಿಷನ್‍ಗೆ ದಾಖಲೆ ಕೊಡಿ ಎನ್ನುತ್ತಿದ್ದ ಸಿಎಂ ಅವರೇ, ಇಂದು ಲೋಕಾಯುಕ್ತ ದಾಳಿಯಲ್ಲಿ ಕಮಿಷನ್ ಕರ್ಮಕಾಂಡಕ್ಕೆ ದಾಖಲೆ ಸಿಕ್ಕಿತಲ್ಲವೇ? ಇದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ಲವೇ? ಅಂತ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.