ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ (Bidar) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.
ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ (Lokayukta Raid) ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!