ಬೆಂಗಳೂರು: ರಾಜ್ಯದಲ್ಲಿ ಗುರುವಾರ (ಇಂದು) ಸಹ ಲೋಕಾಯುಕ್ತ (Lokayukta) ದಾಳಿ ಮುಂದುವರಿದಿದೆ. ಕೆ.ಆರ್‌ಪುರಂ (K.R. Puram) ತಹಶೀಲ್ದಾರ್ (Tahsildar) ಅಜಿತ್ ರೈ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದ ಅಧಿಕಾರಿಗಳು, ರಾತ್ರಿ ಪೂರ್ತಿ ಸಹಕಾರ ನಗರದ ನಿವಾಸದಲ್ಲೇ ಮೊಕ್ಕಾಂ ಹೂಡಿದ್ದರು. ಇಂದು ಸಹ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. 2 ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ಅಜಿತ್ ರೈಗೆ ಸಂಬಂಧಿಸಿದ 11 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 40 ಲಕ್ಷ ರೂ. ನಗದು ಸಹಿತ 1.90 ಕೋಟಿ ರೂ. ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಸ್ತ್ರೀ ಶಕ್ತಿ ಎಫೆಕ್ಟ್ – ಒಂದೇ ತಿಂಗಳಲ್ಲಿ ಹುಲಿಗೆಮ್ಮನ ಹುಂಡಿಯಲ್ಲಿ 1 ಕೋಟಿ ರೂ. ಕಾಣಿಕೆ ಸಂಗ್ರಹ
Advertisement
ಅಲ್ಲದೇ 100 ಎಕರೆಗೂ ಅಧಿಕ ಆಸ್ತಿ ಸಂಬಂಧಿತ ದಾಖಲೆಗಳು ಪತ್ತೆಯಾಗಿವೆ. ಸಂಬಂಧಿಕರು ಹಾಗೂ ಸ್ನೇಹಿತರ ಹೆಸರಿನಲ್ಲಿ ಆಸ್ತಿ ಪತ್ರಗಳು ಸಿಕ್ಕಿದ್ದು, ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.
Advertisement
ದೊಡ್ಡಬಳ್ಳಾಪುರದ ಬಳಿ 98 ಎಕರೆ ಹೊಂದಿರುವ ಭೂಮಿ ಪತ್ರ ಲಭ್ಯವಾಗಿದೆ. ಈ ಆಸ್ತಿಯ ಮೌಲ್ಯ 300 ಕೋಟಿ ರೂ. ಎನ್ನಲಾಗಿದೆ. ಈ ಜಾಗದಲ್ಲಿ ಹಾರ್ಸ್ ರೈಡಿಂಗ್ ಸ್ಕೂಲ್ ಮಾಡಲು ತಯಾರಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇದರ ಜೊತೆ ಕಲ್ಲೂರು ಬಳಿ 30 ಎಕರೆ ಜಮೀನು ಇರುವ ಬಗ್ಗೆ ಆಸ್ತಿ ಪತ್ರ ಪತ್ತೆಯಾಗಿದೆ.
Advertisement
ಇಂದು ಬ್ಯಾಂಕ್ ಸ್ಟೇಟ್‍ಮೆಂಟ್ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ನೂರಾರು ಎಕರೆ ಜಾಗದ ಪತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.
Advertisement
ಲ್ಯಾಂಡ್ ಕ್ರೂಜರ್, ಇನ್ನೋವಾ, ಫಾರ್ಚೂನರ್, ಮಿನಿ ಕೂಪರ್ ಕಾರು ಹಾಗೂ ಡುಕಾಟಿ ಸೇರಿ ಕೆಲ ಬೈಕ್‍ಗಳು ದಾಳಿ ವೇಳೆ ಪತ್ತೆಯಾಗಿವೆ. ವರ್ಷಕ್ಕೆ 1 ಕೋಟಿ ರೂ.ಗಳಿಗಿಂತಲೂ ಅಧಿಕ ಆದಾಯ ಹೊಂದಿರುವ ಅಜಿತ್ ರೈ ಆದಾಯಕ್ಕೂ ಮತ್ತು ದೊರೆತಿರುವ ಆಸ್ತಿಗೂ ಸಾಕಷ್ಟು ವ್ಯತ್ಯಾಸ ಇದೆ ಎಂದು ತಿಳಿದು ಬಂದಿದೆ.
ತಹಶೀಲ್ದಾರ್ ಅಜಿತ್ ರೈಗೆ ಸಂಬಂಧಿಸಿದ ಬ್ಯಾಂಕ್ ಅಕೌಂಟ್ ಫ್ರೀಜ್ ಮಾಡುವಂತೆ ಲೋಕಾಯುಕ್ತ ಅಧಿಕಾರಿಗಳು ಬ್ಯಾಂಕ್‍ಗೆ ಪತ್ರ ಬರೆದಿದ್ದಾರೆ. ದಾಳಿ ನಡೆದಿರುವ ಸ್ಥಳಕ್ಕೆ ಲೋಕಾಯುಕ್ತ ಎಸ್‍ಪಿ ಆಶೋಕ್ ಭೇಟಿ ನೀಡಿದ್ದಾರೆ. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಪತಿ ಅವಾಂತರ
Web Stories