ಶಿವಮೊಗ್ಗ: ಜಿಲ್ಲೆಯ (Shivamogga) ಹಲವೆಡೆ ಮರಳು ಮತ್ತು ಕ್ವಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು (Lokayukta Raids) , ಮರಳು ಗಣಿಗಾರಿಕೆ ಹಾಗೂ ಸಂಗ್ರಹವನ್ನ ಪರಿಶೀಲಿಸಿದ್ದಾರೆ.
ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸಂಪಕಟ್ಟೆ ಮತ್ತು ಸಾಗರದ ಆವಿನಹಳ್ಳಿಯ ಕ್ವಾರಿಗಳ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಕುಸಿದ ಮನೆಯ ಗೋಡೆ – 7 ಮಂದಿ ಪಾರು
ಮರಳು ಕ್ವಾರಿಗಳೊಂದಿಗೆ ಶಿವಮೊಗ್ಗದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಶಿವಮೊಗ್ಗ ಮತ್ತು ಚಿತ್ರದುರ್ಗದ ಲೋಕಾಯುಕ್ತ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇತ್ತೀಚಿಗೆ ನಡೆದ ಕೆಡಿಪಿ ಸಭೆಯಲ್ಲೂ ಅಕ್ರಮ ಮರಳು ಸಾಗಾಟದ ವಿಚಾರ ಚರ್ಚೆಗೆ ಬಂದಿತ್ತು. ಈ ಬಗ್ಗೆ ವ್ಯಾಪಕವಾಗಿ ದೂರು ಕೇಳಿಬಂದ ಬೆನ್ನಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ – ತಪ್ಪಿದ ಅನಾಹುತ
