ಬಾಗಲಕೋಟೆ: ಕಚೇರಿಯಲ್ಲಿ 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಬೀಳಗಿಯ ಸರ್ವೇಯರ್ (Surveyor) ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿ, ಅಣ್ಣೇಶಿ ಲಮಾಣಿ ಎಂಬವರಿಂದ 15 ಸಾವಿರ ರೂ. ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುನಗ ಗ್ರಾಮದಲ್ಲಿದ್ದ 8 ಎಕರೆ ಜಮೀನಿನ ಪಿಟಿ ಶೀಟ್ ಮಾಡಿ ಕೊಡಲು ಆತ ಲಂಚ ಕೇಳಿದ್ದ. ಈ ಹಿಂದೆ 28 ಸಾವಿರ ರೂ. ಪಡೆದು ಕೆಲಸ ಮಾಡಿಕೊಟ್ಟಿರಲಿಲ್ಲ. ಅಲ್ಲದೇ 38 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಸೀಜ್ – ಎನ್‍ಐಎಯಿಂದ 8 ಮಂದಿ ಅರೆಸ್ಟ್
Advertisement
Advertisement
ಇಂದು 15 ಸಾವಿರ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆತ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶ್ ಕವಳಿಕಟ್ಟಿಯನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಲೋಕಾಯುಕ್ತ ಎಸ್‍ಪಿ ಹನುಮಂತರಾಯ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ಪುಷ್ಪಲತಾ ನೇತೃತ್ವದಲ್ಲಿ ದಾಳಿ ನಡೆದಿದೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ – ಶಾಲೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಆರ್.ಅಶೋಕ್ ಭೇಟಿ