ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಹೆಚ್ಚುವರಿ ಬಿಗಿ ಭದ್ರತೆ ಒದಗಿಸಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (Election Commission) ಡಾ.ಸಿ.ಎನ್ ಮಂಜುನಾಥ್ ಪತ್ರ ಬರೆದಿದ್ದಾರೆ.
ಜೂನ್ 4ರಂದು ಲೋಕಸಭಾ ಚುನಾವಣೆಯ ಮಹಾ ಫಲಿತಾಂಶ ಹೊರಬೀಳಲಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಜಿದ್ದಾಜಿದ್ದಿನ ಫಲಿತಾಂಶದ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಭದ್ರತೆ ಒದಗಿಸುವಂತೆ ಮಂಜುನಾಥ್ (Dr. C.N Manjunath) ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಶಾಂತಿ ಕದಡುವ ಸಂಚು ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸೋಲುವ ಸಂಭವ ಇದ್ದರೆ ಗಲಾಟೆಯಾಗುವ ಸಾಧ್ಯತೆ ಇದೆ. ಡಿಕೆಶಿ ಅವರು ಆಡಳಿತ ಯಂತ್ರ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಎಣಿಕೆ ಕೇಂದ್ರದ ಒಳಗೆ, ಸುತ್ತಮುತ್ತ ಸಿಸಿಟಿವಿ ಹಾಗೂ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಹಾಗೂ ಎಣಿಕೆ ಕೇಂದ್ರಕ್ಕೆ ಬರುವವರು ಹೋಗುವವರ ಮೇಲೆ ತೀವ್ರ ನಿಗಾ ಇಡುವಂತೆ ಮಂಜುನಾಥ್ ಅವರು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಬಂಧನಕ್ಕೆ ಪೊಲೀಸರು ಹುಡುಕುತ್ತಿದ್ದಾರೆ: ಪರಮೇಶ್ವರ್
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಡಾ.ಸಿ.ಎನ್.ಮಂಜುನಾಥ್ ಹಾಗೂ ಕಾಂಗ್ರೆಸ್‍ನಿಂದ ಡಿಕೆ ಸುರೇಶ್ ಸ್ಪರ್ಧೆ ಮಾಡಿದ್ದಾರೆ.