– ಪ್ರಜ್ವಲ್‍ಗೆ ಟಿಕೆಟ್ ಕೊಡದಂತೆ ಪ್ರೀತಂಗೌಡ ಪರೋಕ್ಷ ವಿರೋಧ
ಹಾಸನ: ಲೋಕಸಭಾ ಚುನಾವಣೆ (Loksabh Election) ಸಮೀಪಿಸುತ್ತಿದ್ದು ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಆದರೆ ಇನ್ನೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೆ ಹಾಲಿ ಸಂಸದರು ಹಾಗೂ ಟಿಕೆಟ್ ಆಕಾಂಕ್ಷಿಗಳು ಕಸರತ್ತು ಆರಂಭಿಸಿದ್ದಾರೆ. ಅತ್ತ ಹಾಸನದಲ್ಲಿ ಇನ್ನೂ ಯಾರು ಅಭ್ಯರ್ಥಿ ಎಂಬುದೇ ಘೋಷಣೆ ಆಗಿಲ್ಲ. ಸ್ಥಳೀಯ ಬಿಜೆಪಿ ನಾಯಕರ ವಿರೋಧದ ನಡುವೆಯೂ ಜೆಡಿಎಸ್‍ನ ಏಕೈಕ ಸಂಸದ ಪ್ರಜ್ವಲ್ ರೇವಣ್ಣ ಫುಲ್ ಆಕ್ಟೀವ್ ಆಗಿದ್ದಾರೆ.
Advertisement
ಹಾಸನ ಹಾಗೂ ಮಂಡ್ಯ (Hassan- Mandya) ಎರಡೂ ಲೋಕಸಭಾ ಕ್ಷೇತ್ರಗಳು ಬಿಜೆಪಿಗೆ ಬೇಕೇಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ (Preetham Gowda) ಪದೇಪದೇ ಒತ್ತಾಯಿಸುವ ಮೂಲಕ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಟಿಕೆಟ್ ನೀಡದಂತೆ ಪರೋಕ್ಷವಾಗಿ ವಿರೋಧಿಸುತ್ತಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು (HD Devegowda) ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?
Advertisement
Advertisement
ಇದಲ್ಲದೇ ಕಳೆದ ಮೂರು ದಿನಗಳಿಂದ ಕಡೆಯ ದಿಶಾ ಸಭೆ ನಡೆಸಿದ ಪ್ರಜ್ವಲ್, ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನಡೆಯುತ್ತಿರುವ ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಸೂಚನೆ ನೀಡಿದರು. ಎಲ್ಲಾ ತರದಲ್ಲೂ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದೀರಾ, ಐದು ವರ್ಷಗಳ ಕಾಲ ಅಧಿಕಾರಿಗಳು ಸಹಕರಿಸಿದ್ದೀರಾ ನಾನು ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ, ದಿಶಾ ಸಭೆಯಲ್ಲಿ ಸರಿಯಾದ ನಡವಳಿಕೆ ನಡೆದುಕೊಂಡಿಲ್ಲ ಎಂದರೆ ಹೃದಯಪೂರ್ವಕವಾಗಿ ಕ್ಷಮೆ ಕೇಳುತ್ತೇನೆ ಎಂದರು.
Advertisement
ಒಟ್ಟಿನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯ ಕಡೆ ಮುಖ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ, ಪ್ರೀತಂಗೌಡ ಪ್ರಜ್ವಲ್‍ರೇವಣ್ಣ ಪರ ನಿಲ್ಲುತ್ತಾರಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ.