ಮಂಗಳೂರು: ಲೋಕಸಭಾ ಚುನಾವಣಾ (Loksabha Election) ಹೊಸ್ತಿಲಲ್ಲೇ ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಭಾವುಕರಾಗಿದ್ದಾರೆ.
ಬಂಟ್ವಾಳದ (Bantwal) ಅಭಿನಂದನಾ ಸಮಾರಂಭವೊಂದರಲ್ಲಿ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಕಟೀಲ್, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ. ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ ಎಂದರು.
Advertisement
Advertisement
ಹಲವು ನೋವನ್ನ ಅನುಭವಿಸಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೂ ದುಃಖವಿದೆ ಸಂಸದನಾದ ಬಳಿಕ ಹಳ್ಳಿ-ಹಳ್ಳಿಗಳಿಗೆ ಬರಲು ಆಗಲಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ (BJP) ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಆದರೆ ನೀವು ತಲೆ ತಗ್ಗಿಸುವ ರೀತಿಯ ಕೆಲಸ ಮಾಡಲಿಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ: ಮಾಜಿ ಶಾಸಕ ಸುರೇಶ್‌ಗೌಡ ವಾಗ್ದಾಳಿ
Advertisement
Advertisement
ಈಗ ಮತ್ತೆ ನಾನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯತ್ತ ಗಮನ ನೀಡುತ್ತೇನೆ. ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇನ್ನೂ ಉಳಿದಿರುವ ಆರು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ. ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಅವರು ತಿಳಿಸಿದರು.