ಚಿಕ್ಕಬಳ್ಳಾಪುರ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ನಾನೇ ಗೆಲ್ಲುವುದು ಎಂದು ಮೈತ್ರಿ ಅಭ್ಯರ್ಥಿ ಡಾ.ಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಹೊರವಲಯದ ನಾಗಾರ್ಜುನ ಕಾಲೇಜು ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿಯೂ ನಾನೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಎಕ್ಸಿಟ್ ಪೋಲ್ ಬಗ್ಗೆ ನನಗೆ ನಂಬಿಕೆಯಿಲ್ಲ. ಮಧ್ಯಾಹ್ನದ ಒಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದಿದ್ದಾರೆ.
Advertisement
Advertisement
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಚಿಕ್ಕಬಳ್ಳಾಪುರ ಹೊರವಲಯದ ನಾಗಾರ್ಜುನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೊಯ್ಲಿ ಆಗಮಿಸಿದ್ದಾರೆ.
Advertisement
ಚಿಕ್ಕಬಳ್ಳಾಪುರದಲ್ಲಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಾಲಿ ಸಂಸದ ಎಂ. ವೀರಪ್ಪ ಮೊಯ್ಲಿ ಹಾಗೂ ಕಳೆದ ಬಾರಿ ಸ್ಪರ್ಧೆ ಮಾಡಿ ಸೋಲುಂಡಿದ್ದ ಬಿಜೆಪಿಯ ಬಿ.ಎನ್ ಬಚ್ಚೇಗೌಡ ಹಾಗೂ ಬಿಎಸ್‍ಪಿ ಪಕ್ಷದಿಂದ ಡಾ. ಸಿಎಸ್ ದ್ವಾರಕನಾಥ್ ಸ್ಪರ್ಧೆ ಮಾಡಿದ್ದಾರೆ.