ಆನೇಕಲ್: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಗೆ (Loksabha Elections 2024) ಮತದಾನ ನಡೆಯುತ್ತಿದೆ. ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ ಹಾಕಿ, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಆನೇಕಲ್‍ನಲ್ಲಿ ಮತದಾರರನ್ನು ಸೆಳೆಯಲು ವಿಭಿನ್ನ ಪ್ರಯತ್ನವೊಂದು ನಡೆದಿದೆ.
ಹೌದು. ಬಿಸಿಲಿನ ಬೇಗೆಯ ನಡುವೆಯೂ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡುತ್ತಿದ್ದಾರೆ. ಹೀಗಾಗಿ ಬಿಸಿಲಿನ ದಗೆಗೆ ಬಿಸಿಲಿನ ದಗೆಗೆ ಪಾನಕ, ಮಜ್ಜಿಗೆ ನೀಡುವ ಮೂಲಕ ಮತದಾರರನ್ನು ಹುರಿದುಂಬಿಸಲಾಗುತ್ತಿದೆ. ಇದನ್ನೂ ಓದಿ: ತಪ್ಪದೇ ಮತದಾನ ಮಾಡಿ: ಕಾಂತಾರ ಬೆಡಗಿ ಸಪ್ತಮಿ ಗೌಡ
ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಶಾಂತಿಪುರದಲ್ಲಿ ಮತದಾರರಿಗೆ ಪಾನಕ ನೀರು, ಮಜ್ಜಿಗೆ, ಹೆಸರುಬೇಳೆ ವಿತರಣೆ ಮಾಡಲಾಗುತ್ತಿದೆ. ಮತದಾರರು ಪಾನಕ ಕುಡಿದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಅತ್ಯಂತ ಉತ್ಸಾದಿಂದಲೇ ಬಂದು ಸಾರ್ವಜನಿಕರು ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಬೆಳಗ್ಗೆ 9 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರದಲ್ಲಿ 8.39% ಮತದಾನವಾಗಿದೆ. ಇಲ್ಲಿ ಕಾಂಗ್ರೆಸ್ ನಿಂದ ಡಿ.ಕೆ ಸುರೇಶ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಡಾ. ಸಿ.ಎನ್ ಮಂಜುನಾಥ್ ಚುನಾವಣಾ ಅಖಾಡದಲ್ಲಿದ್ದಾರೆ.