ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.
14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.
ಮೋದಿ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಮೋದಿಯವರು ಹತಾಶೆಯಿಂದ ಭಾಷಣ ಮಾಡುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಾಗಿ ಮಾಡುವ ಭಾಷಣವಲ್ಲ. ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ಭಾಷಣವಾಗಿದೆ. ಸೋಲುತ್ತೀವಿ ಅನ್ನೋ ಭಯ ಅವರಿಗರಬೇಕು ಎಂದರು. ಇದನ್ನೂ ಓದಿ: ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಇಲ್ಲ – ಇವಿಎಂ ಬಗ್ಗೆ ಸಲ್ಲಿಕೆಯಾದ ಎಲ್ಲಾ ಅರ್ಜಿ ವಜಾ
ದೇವೇಗೌಡರ ವಿರುದ್ಧ ವಾಗ್ದಾಳಿ: ದೇವೇಗೌಡರ ಕಣ್ಣೀರು ಕೃತಕವಾದದ್ದು. ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು. ಅದರೆ ದೇವೇಗೌಡರ ಕುಟುಂಬ ಯಾವಾಗಲೂ ಕಣ್ಣೀರು ಹಾಕುತ್ತಾರೆ. ಇದೆಲ್ಲ ಕೃತಕವಾದದ್ದು ಎಂದು ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಬೆಳಗ್ಗೆ 9 ಗಂಟೆಯವರೆಗೆ 11.01% ರಷ್ಟು ಮತದಾನವಾಗಿದೆ. ಮೈಸೂರುರಿನಲ್ಲಿ ಬಿಜೆಪಿಯಿಂದ ಯದುವೀರ್ ಹಾಗೂ ಕಾಂಗ್ರೆಸ್‍ನಿಂದ ಲಕ್ಷ್ಮಣ್ ಅಖಾಡದಲ್ಲಿದ್ದಾರೆ.