– ಜೆಡಿಎಸ್ ಮುಖಂಡರು, ಕಾರ್ಯಕರ್ತರಿಗೆ ಡಿಕೆಶಿ ಕರೆ
ಬೆಂಗಳೂರು: ಲೋಕಸಭಾ ಚುನಾವಣೆಯ (Loksabha Elections 2024) ಕಣ ರಾಜ್ಯದಲ್ಲಿ ರಂಗೇರುತ್ತಿದೆ. ಕ್ಷೇತ್ರಗಳಲ್ಲಿ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾಯಕರು ಪಣತೊಟ್ಟಿದ್ದಾರೆ. ಇತ್ತ ಕಾಂಗ್ರೆಸ್ (Congress) ಗುರುವಾರ ರಾತ್ರಿ ಮಿಡ್ ನೈಟ್ ಆಪರೇಷನ್ ಮೂಲಕ ಬೆಳ್ಳಂಬೆಳಗ್ಗೆ ದಳಪತಿಗಳಿಗೆ ಶಾಕ್ ನೀಡಿದೆ.
Advertisement
ಹೌದು. ತಡರಾತ್ರಿ 11.30ರ ಸುಮಾರಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ. ಅಕ್ಕೂರ್ ದೊಡ್ಡಿ ಶಿವಣ್ಣ ಸೇರಿ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಉಪಸ್ಥಿತರಿದ್ದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರೇ ಕಾರ್ಯಕರ್ತರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ದೋಸ್ತಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.
Advertisement
Advertisement
ಬಳಿಕ ಮಾತನಾಡಿದ ಡಿಕೆಶಿ, ಚನ್ನಪಟ್ಟಣ ಭಾಗದ 300 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈಗಾಗಲೇ ಮಾಗಡಿ, ರಾಮನಗರ, ಚನ್ನಪಟ್ಟಣ ಭಾಗದ 4 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿಕೊಂಡಿದ್ದಾರೆ. ಬಹುತೇಕ ಕುಮಾರಸ್ವಾಮಿ (HD Kumaraswamy) ಅವರ ಆಪ್ತರೇ ಕಾಂಗ್ರೆಸ್ ಮೆಚ್ಚಿ ಬರುತ್ತಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?
Advertisement
ಡಿಕೆಶಿ ಕರೆ: ಕುಮಾರಸ್ವಾಮಿ ಮಂಡ್ಯಕ್ಕೆ ಹೊರಟು ಹೋಗಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲ್ಲ. ಜೆಡಿಎಸ್‍ಗಾಗಿ ನಿಮ್ಮ ಸಮಯ ಹಾಳು ಮಾಡಿಕೊಳ್ಳಬೇಡಿ. ಎಲ್ಲರೂ ನಮ್ಮ ಜೊತೆ ಬನ್ನಿ, ನಿಮ್ಮ ಜೊತೆ ನಾನು ಇರ್ತೇನೆ ಎಂದು ಇದೇ ವೇಳೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಡಿಕೆಶಿ ಕರೆ ಕೊಟ್ಟಿದ್ದಾರೆ.