ಹಾಸನ: ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ ಆಯೋಜನೆ ಮಾಡಿದ್ದು, ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ. ದಾಳಿ ಬಳಿಕ ತಂಡವು ಬಾಡೂಟವನ್ನು ವಶಕ್ಕೆ ಪಡೆದು ನಾಶ ಮಾಡಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎಚ್.ಡಿ.ರೇವಣ್ಣ ಅವರ ಕುಮ್ಮಕ್ಕಿನಿಂದ ದಾಳಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಏ.16ರಿಂದ ಮಂಡ್ಯದಲ್ಲಿ ಹೆಚ್‌ಡಿಕೆ ಪ್ರಚಾರ – ʻಕೈʼ ಕಟ್ಟಿಹಾಕಲು ದಳಪತಿ ಪ್ಲ್ಯಾನ್ ಏನು?
Advertisement
Advertisement
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಚಾರ ಸಭೆಗೆ ಬರುವವರಿಗೆ ಬಾಡೂಟ ವ್ಯವಸ್ಥೆ ಮಾಡಿದ್ದರು. ಆದರೆ ಈ ವಿಚಾರ ತಿಳಿದು ಎಫ್‍ಎಸ್‍ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿದೆ. ಅಲ್ಲದೇ ಪರಿಶೀಲಿಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ.
Advertisement
ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಎಫ್‍ಎಸ್‍ಟಿ ತಂಡವು ನಾನ್‍ವೆಜ್ ಊಟವನ್ನು ವಶಕ್ಕೆ ಪಡೆದಿದೆ. ನಂತರ ರಸ್ತೆಗೆ ಬದಿಗೆ ಸುರಿದು ನಾಶ ಮಾಡಿ ಬಳಿಕ ಪೊಲೀಸ್ ಠಾಣೆಗೆ ತಂಡ ದೂರು ನೀಡಿದೆ. ಬಾಡೂಟ ಆಯೋಜನೆ ಸಂಬಂಧ ಗ್ರಾಮದ ಓರ್ವನ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಹುಟ್ಟುಹಬ್ಬದ ಅಂಗವಾಗಿ ನಾನ್‍ವೆಜ್ ಊಟ ಮಾಡಿಸಲಾಗಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದು, ಇದೀಗ ವೀಡಿಯೋ ಮಾಡಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಕೆಲವರು ರಸ್ತೆಗೆ ಚೆಲ್ಲಿರುವ ಊಟವನ್ನೇ ತಿಂದಿದ್ದಾರೆ.