ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿದ್ದು, ತಮ್ಮ ತಮ್ಮ ಪಕ್ಷದ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅಂತೆಯೇ ಪ್ರಧಾನಿ ನರೇಂದ್ರ ಮೊದಿಯವರು (Narendra Modi) ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 14 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಪ್ರಧಾನಿ ಬಿರುಸಿನ ಪ್ರಚಾರ (Election Campaign) ನಡೆಸಲಿದ್ದಾರೆ. ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ದೇವನಹಳ್ಳಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಅಲ್ಲದೇ ಅದೇ ದಿನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡು ರೋಡ್ ಶೋ (Namo Road Show) ನಡೆಸಲು ಪ್ಲಾನ್ ರೂಪಿಸಲಾಗಿದೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ನಮೋ ರೋಡ್ ಶೋಗೆ ಇಂದು ರೂಟ್‍ಮ್ಯಾಪ್ ಸಿದ್ಧಪಡಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: RSS ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ: ಪ್ರಜ್ವಲ್ ರೇವಣ್ಣ ಕ್ಷಮೆ