ಬೆಂಗಳೂರು: ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಎಸ್.ಟಿ ಸೋಮಶೇಖರ್ (ST Somashekhar) ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ. ರಾಜೀವ್ ಗೌಡ ಪರ ಮನೆಮನೆ ಹೋಗಿ ಮತ ಕೇಳೋದಾಗಿ ಘೋಷಿಸಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಶಾಸಕ ಎಸ್. ಟಿ ಸೋಮಶೇಖರ್, ಈ ಘೋಷಣೆ ಮಾಡಿದ್ದಾರೆ.
Advertisement
Advertisement
ಸಭೆ ಬಳಿಕ ಮಾತಾಡಿದ ಎಸ್ ಟಿ ಎಸ್, ಬಿಜೆಪಿಯಿಂದ (BJP) ಲೋಕಸಭೆ ಅಭ್ಯರ್ಥಿ ಘೋಷಣೆಯಾದರೂ, ಇದುವರೆಗೂ ಯಾರೊಬ್ಬರೂ ನನ್ನನ್ನ ಬೆಂಬಲ ಕೊಡಿ ಎಂದು ಕೇಳಿಲ್ಲ. ನನ್ನ ಕ್ಷೇತ್ರದಲ್ಲಿ 7-8 ಬಾರಿ ಪ್ರಚಾರ ಮಾಡಿದ್ದಾರೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಯಾರು ನನ್ನನ್ನ ಸಂಪರ್ಕ ಮಾಡದೆ ಇದ್ದದ್ದಕ್ಕೆ ಸಭೆ ಕರೆದಿದ್ದೇನೆ. ಇಷ್ಟೆಲ್ಲಾ ಆದ ಮೇಲೆ ಸುಮ್ಮನೆ ಇದ್ದರೆ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತೆ. ನನ್ನ ಕ್ಷೇತ್ರಕ್ಕೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಬೆಂಬಲ ನೀಡುತ್ತೇನೆ. ಅವರ ಕೈಲಿ ಏನ್ ಮಾಡೋಕಾಗುತ್ತೋ ಮಾಡ್ಲಿ ಎಂದು ಸವಾಲು ಹಾಕಿದ್ರು. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ – ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್
Advertisement
Advertisement
ರಾಜ್ಯ ನಾಯಕರು ಮಾತ್ರವಲ್ಲ, ಕೇಂದ್ರ ನಾಯಕರು ನನ್ನ ಸಂಪರ್ಕಿಸಿಲ್ಲ. ಮೊನ್ನೆ ಅಮಿತ್ ಶಾ ಬಂದ್ರೂ ಕೂಡ ನನಗೆ ಆಹ್ವಾನ ನೀಡಿಲ್ಲ. ನೆನ್ನೆವರೆಗೂ ಕಾದಿದ್ದೆ, ಯಾರೂ ಪ್ರಚಾರಕ್ಕೆ ಕರೆದಿಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದೇನೆ ಎಂದು ಸೋಮಶೇಖರ್ ಸ್ಪಷ್ಟನೆ ನೀಡಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಿಡಿಕಾರಿದ ಎಸ್‌ಟಿಎಸ್, ಚಿಕ್ಕಮಂಗಳೂರಿಂದ ಗೋ ಬ್ಯಾಕ್ ಎಂದು ಹೊರ ಹಾಕಿದವರನ್ನು ತಂದು ಚುನಾವಣೆಗೆ ನಿಲ್ಲಿಸಿದ್ದಾರೆ. ಅಂತಹವರನ್ನ ಬೆಂಗಳೂರಿನವರು ಸ್ವಾಗತಿಸಬೇಕಾ ಎಂದು ಪ್ರಶ್ನಿಸಿದರು.