ಹಾಸನ: ಲೋಸಕಭಾ ಚುನಾವಣೆಯ ಮತೆಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಮುನ್ನಡೆ ಸಾಧಿಸಿದ್ದಾರೆ.
ಹಾಲಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್‌ನ ಶ್ರೇಯಸ್ ಪಟೇಲ್ ಅವರಿಗಿಂತ 5,201 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು 1.4 ಲಕ್ಷಕ್ಕೂ ಹೆಚ್ಚು ಅಂತರದಿಂದ ಕ್ಷೇತ್ರವನ್ನು ಗೆದ್ದಿದ್ದರು.
Advertisement
Advertisement
ಹಾಸನ ಲೋಕಸಭಾ ಕ್ಷೇತ್ರದಲ್ಲಿ 15 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರಮುಖವಾಗಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಣದಲ್ಲಿದ್ದಾರೆ.
Advertisement
ಮತ ಎಣಿಕೆಗಾಗಿ 500 ಸಿಬ್ಬಂದಿ, ಭದ್ರತೆಗಾಗಿ 400 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಪ್ರತಿ ಟೇಬಲ್‌ನಲ್ಲಿ ಕೌಂಟಿಂಗ್ ಅಸಿಸ್ಟೆಂಟ್, ಕೌಂಟಿಂಗ್ ಸುಪರ್ವೈಸರ್ ಸೇರಿ ಒಟ್ಟು ನಾಲ್ಕು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17,36,610 ಮತದಾರರಿದ್ದಾರೆ.
Advertisement
13,48,966 ಮಂದಿ ಮತದಾರರು ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಮತದಾನ 77.68% ಮತದಾನವಾಗಿತ್ತು. ಇದೀಗ ಹಾಸನದಲ್ಲಿ ಯಾರು ಗೆಲ್ಲುತ್ತಾರೆ ಎಂದು ಕ್ಷೇತ್ರದ ಜನರಲ್ಲಿ ಭಾರೀ ಕುತೂಹಲ ಮೂಡಿದೆ.