– ತಡರಾತ್ರಿಯೇ ದೇವೇಗೌಡ್ರ ಮನೆಗೆ ಭೇಟಿ
ಬೆಂಗಳೂರು: ಲೊಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರದ ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ತುಮಕೂರು ಲೋಕಸಭಾ ಕ್ಷೇತ್ರ ಕೈ ತಪ್ಪಿದ್ದಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನ ಉಂಟಾಗಿದೆ. ಹೀಗಾಗಿ ತಮ್ಮ ಕ್ಷೇತ್ರ ಉಳಿಸಿಕೊಳ್ಳಲು ಪರಮೇಶ್ವರ್ ಅಂತಿಮ ಕಸರತ್ತು ನಡೆಸುತ್ತಿದ್ದಾರೆ.
Advertisement
Advertisement
ಗುರುವಾರ ತಡರಾತ್ರಿಯೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪರಮೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಮಾತುಕತೆಯ ವೇಳೆ ತುಮಕೂರು ಕ್ಷೇತ್ರ ಬಿಟ್ಟುಕೊಡಿ ಎಂದು ದೇವೇಗೌಡರಿಗೆ ಮನವಿ ಮಾಡಿದ್ದಾರೆ. ಎನ್ನಲಾಗಿದೆ.
Advertisement
ಪರಮೇಶ್ವರ್ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭೇಟಿ ನೀಡಿದ್ದು, 20 ನಿಮಿಷಗಳ ಕಾಲ ದೇವೇಗೌಡರ ಜೊತೆ ದಿನೇಶ್ ಗುಂಡೂರಾವ್ ಮಾತುಕತೆ ನಡೆಸಿದ್ದಾರೆ ಎಂಬವುದಾಗಿ ತಿಳಿದುಬಂದಿದೆ.
Advertisement
ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಗೊಂದಲ ಬಹುತೇಕ ಬಗೆ ಹರಿದಿದ್ದು, ಸೀಟು ಹಂಚಿಕೆ ಅಂತಿಮವಾಗಿದೆ. ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು- ಉಡುಪಿ, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಜೆಡಿಎಸ್‍ಗೆ ಸಿಕ್ಕಿದೆ. ಇಬ್ಬರ ಮಧ್ಯೆ ಚರ್ಚೆಗೆ ಕಾರಣವಾಗಿದ್ದ ಮೈಸೂರು ಕ್ಷೇತ್ರ ಕಾಂಗ್ರೆಸ್ಸಿಗೆ ಸಿಕ್ಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv