ಬೆಂಗಳೂರು: ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ (H.D.Revanna) ಲುಕ್‌ಔಟ್ ನೋಟಿಸ್ ನೀಡಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ನೋಟಿಸ್ ಕೊಟ್ಟಿದ್ದರೂ ರೇವಣ್ಣ ಗೈರಾಗಿದ್ದಾರೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ ಕೊಡಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಗುಡುಗಿದ ಸಿಎಂ
ಕಳೆದ ಮೂರು ದಿನಗಳಿಂದ ಹೆಚ್.ಡಿ.ರೇವಣ್ಣ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಎರಡನೇ ಪ್ರಕರಣದ ಬಳಿಕ ರೇವಣ್ಣಗೆ ನೋಟಿಸ್ ನೀಡಲಾಗಿದೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿದೇಶಕ್ಕೆ ಹಾರಿದ್ದಾರೆ. ಜರ್ಮನಿಯಲ್ಲಿ ಉಳಿದಿದ್ದಾರೆ ಎನ್ನಲಾಗಿತ್ತು. ನಂತರ ದುಬೈಗೆ ತೆರಳಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ವಿಡಿಯೋ ಬಿಡುಗಡೆ ಮಾಡಲು ನನಗೆ ಹುಚ್ಚು ಹಿಡಿದಿದ್ಯಾ? ಟೆಂಟ್‌ನಲ್ಲಿ ಬ್ಲೂ ಫಿಲಂ ಬಿಡುಗಡೆ ಮಾಡುವವರಿಂದ ರಿಲೀಸ್ : ಹೆಚ್‌ಡಿಕೆ
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣಕ್ಕೆ ಪ್ರತ್ಯೇಕ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ನಾಳೆ (ಮೇ 4) ಆಲಿಸಿ ಆದೇಶ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.