ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ (Actress) ಅಭಿನಯ (Abhinaya) ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ (Lookout Notice) ಜಾರಿಯಾಗಿದೆ.
ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು ಮಾಡಿದ್ದರು. ಅಭಿನಯ ಕುಟುಂಬ ವರದಕ್ಷಿಣೆ ಹಣ ಪಡೆದಿದ್ದಲ್ಲದೆ ಲಕ್ಷ್ಮಿದೇವಿಯವರನ್ನು ಪೋಷಕರ ಮನೆಗೆ ಅಟ್ಟಿದ್ದರು. 80 ಸಾವಿರ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ವರದಕ್ಷಿಣೆ ರೂಪವಾಗಿ ಪಡೆದಿರುವುದು ಕೂಡ ಸಾಬೀತಾಗಿತ್ತು. ಸೆಷನ್ಸ್ ಕೋರ್ಟ್ ಅಭಿನಯ, ತಾಯಿ ಹಾಗೂ ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು.
ಯಾವಾಗ ಜೈಲು ಶಿಕ್ಷೆ ಪ್ರಕಟವಾಯಿತೋ, ಅಂದಿನಿಂದ ಅಭಿನಯ ಮತ್ತು ಕುಟುಂಬದ ಸದಸ್ಯರು ಪೊಲೀಸರ ಕೈಗೆ ಸಿಗದೇ ತಕೆಮರೆಸಿಕೊಂಡಿದ್ದಾರೆ. ಈ ಮೊದಲು ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಅಭಿನಯ, ಸಹೋದರ ಹಾಗೂ ತಾಯಿ ಹೈಕೋರ್ಟ್‌ಗೆ ಹೋಗಿದ್ದರು. ಆದರೆ ಹೈಕೋರ್ಟ್ ಸಹ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆ ಆರೋಪಿಗಳನ್ನು ಬಂಧಿಸಬೇಕಿತ್ತು. ಆದರೆ ಪೊಲೀಸರ ಕೈಗೆ ಅವರು ಸಿಗದೇ ತಲೆಮರೆಸಿಕೊಂಡಿದ್ದಾರೆ. ಇದೀಗ ನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಪತ್ತೆಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಅರಸೀಕೆರೆಯಲ್ಲಿ ಮತ್ತೆ ಜೆಡಿಎಸ್ ಗೆಲ್ಲುವವರೆಗೂ ನಾನು ನಿದ್ರೆ ಮಾಡಲ್ಲ – ಪ್ರಜ್ವಲ್ ಶಪಥ
ಸಾರ್ವಜನಿಕರಿಗೆ ಈ ಎಲ್ಲಾ ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿ ರಾಜ್ಯಸಭಾ ಕಲಾಪದ ಅಧ್ಯಕ್ಷತೆ ವಹಿಸಿದ ಪಿ.ಟಿ ಉಷಾ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k