Bengaluru City
ನೈಸ್ ರಸ್ತೆಯಲ್ಲಿ ಲಾರಿಗಳ ನಡುವೆ ಅಪಘಾತ- ಇಬ್ಬರಿಗೆ ಗಂಭೀರ ಗಾಯ, ಟ್ರಾಫಿಕ್ ಜಾಮ್

ಬೆಂಗಳೂರು: ನೈಸ್ ರಸ್ತೆಯಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಈ ಘಟನೆ ನೈಸ್ ರಸ್ತೆಯ ಕನಕಪುರ ಟೋಲ್ ಬಳಿ ನಡೆದಿದೆ. ಅಪಘಾತವಾದ ಪರಿಣಾಮ ನೈಸ್ ರಸ್ತೆಯಲ್ಲಿ ಸುಮಾರು ಐದು ಕಿಲೋಮೀಟರ್ ಗಳಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ರು.
ಇನ್ನು ಅಪಘಾತದಿಂದಾಗಿ ನಡುರಸ್ತೆಯಲ್ಲಿಯೇ ಲಾರಿಯಲ್ಲಿದ್ದ ಉದ್ದಿನ ಬೆಳೆ, ಕಡಲೆ, ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.
