ಹುಬ್ಬಳ್ಳಿ: ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಹುಡಾ ಮಾಜಿ ಅಧ್ಯಕ್ಷ ನಾಗೇಶ್ ಕಲಬುರ್ಗಿ ಪುತ್ರ ಮೃತಪಟ್ಟಿದ್ದಾರೆ.
ತಿಲಕ್ ಕಲಬುರ್ಗಿ (22) ಮೃತ ದುರ್ದೈವಿ. ತಾರಿಹಾಳ ಬೈಪಾಸ್ ಬಳಿ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಭವ್ಯ ಭಾರತಕ್ಕೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ – ದೇಶವಾಸಿಗಳಿಗೆ ಪ್ರಧಾನಿ ಶುಭಾಶಯ
Advertisement
Advertisement
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ರಭಸಕ್ಕೆ ತಿಲಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.