CrimeDistrictsKarnatakaLatestMain PostRaichur

ಬೈಕ್‍ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಒಬ್ಬನಿಗೆ ಗಂಭೀರ ಗಾಯ

Advertisements

ರಾಯಚೂರು: ನಗರದ ಹೊರವಲಯದ ಬೈಪಾಸ್ ರಸ್ತೆಯ ಮರ್ಚಡ್ ಕ್ರಾಸ್ ಬಳಿ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬನಿಗೆ ಗಂಭೀರ ಗಾಯಗಳಾಗಿವೆ.

ಮೃತರನ್ನ ಮರ್ಚೇಡ್ ಗ್ರಾಮದ ತಿಪ್ಪಣ್ಣ(18), ತಿಮ್ಮಾಪುರ ಗ್ರಾಮದ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಇನ್ನೋರ್ವ ಉದಯ್‌ಗೆ ಗಂಭೀರ ಗಾಯಗಳಾಗಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯ ಕೊಳಕು ರಾಜಕೀಯವನ್ನು ಜನರು ಸೋಲಿಸಿದ್ದಾರೆ: ಕೇಜ್ರಿವಾಲ್

ಅಪಘಾತದ ಸ್ಥಳಕ್ಕೆ ಮೃತ ಯುವಕರ ಕುಟುಂಬಸ್ಥರು ಬಂದಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಹಿನ್ನೆಲೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Live Tv

Leave a Reply

Your email address will not be published.

Back to top button