ತುಮಕೂರು: ಕಾರು ಲಾರಿಗೆ (Car- Lorry Accident) ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.
ಆಕಾಶ್ (20) ಹೇಮಂತ್ (28) ಶಿವಕುಮಾರ್ ಮೃತ ದುರ್ದೈವಿಗಳು. ಘಟನೆಯಲ್ಲಿ ಉಜ್ವಲ್ ಕೃಷ್ಣ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ
ಕಾರು (Car) ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದರೆ, ಲಾರಿ (Lorry) ಪಾವಗಡದಿಂದ ತುಮಕೂರು ಕಡೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ.
ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]