Bengaluru RuralKarnatakaLatestLeading NewsMain Post

ಕಲ್ಲು ತುಂಬಿ ನಿಂತಿದ್ದ ಲಾರಿಗೆ KSRTC ಬಸ್‌ ಡಿಕ್ಕಿ – ಬಸ್‌ನಲ್ಲಿದ್ದ ದಂಪತಿ ದುರ್ಮರಣ, 20 ಮಂದಿಗೆ ಗಾಯ

ಬೆಂಗಳೂರು ಗ್ರಾಮಾಂತರ: ಕಲ್ಲು ತುಂಬಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್‌ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಮತ್ತು ಕೋಲಾರ ರಸ್ತೆಯಲ್ಲಿ ನಡೆದಿದೆ.

ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಮುಂಜಾನೆ ಮೂರು ಗಂಟೆ ಸುಮಾರಿನಲ್ಲಿ ಅಪಘಾತ ಸಂಭವಿಸಿವೆ. ಬಸ್‌ ಕೋಲಾರದಿಂದ ಬೆಂಗಳೂರಿಗೆ ಬರಬೇಕಾದರೆ ಹೊಸಕೋಟೆ ಬಳಿ ಅಪಘಾತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಸ್‌ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button