ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಕೃಷ್ಟಪ್ಪ(62) ಮೃತ ದುರ್ದೈವಿ. ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಈತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಬ್ ನಿಷೇಧ: ಕಾಲೇಜು ನಿರ್ಧಾರ ಎತ್ತಿಹಿಡಿದ ಬಾಂಬೆ ಹೈಕೋರ್ಟ್
ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟಿಟಿಯಲ್ಲಿ ಸಿಲುಕಿಕೊಂಡಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಟ್ಟರು.
ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.