ರಾಯಚೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಜೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಮಾನ್ವಿಯ (Manvi) ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೊಪ್ಪಳದ (Koppal) ಗಂಗಾವತಿ ಮೂಲದ ವೆಂಕಟಾಚಲಪತಿ (45) ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ದಾವಣಗೆರೆ | ಪ್ರೀತಿಸುವಂತೆ ಯುವತಿಗೆ ಪೀಡಿಸಿದ ಯುವಕನಿಗೆ 3 ತಿಂಗಳ ಜೈಲು!
ಮೃತ ವೆಂಕಟಾಚಲಪತಿ ಗಂಗಾವತಿಯ ಜೆಸ್ಕಾಂನಲ್ಲಿ ಹಿರಿಯ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರಿನಲ್ಲಿ ರಾಯಚೂರಿನಿಂದ ಗಂಗಾವತಿಗೆ ತೆರಳುತ್ತಿದ್ದರು. ಇದೇ ವೇಳೆ ಲಾರಿಯೊಂದು ರಾಯಚೂರಿಗೆ ಹೊರಟಿತ್ತು. ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ