Chitradurga
ಲಾರಿಗೆ ಕಾರು ಡಿಕ್ಕಿ – ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬಾಲೇನಹಳ್ಳಿ ಸಮೀಪ ನಡೆದಿದೆ.
ಬಾಲೇನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 151ಎ ರಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ಕಾರು ಚಾಲಕ ಪ್ರಭಾಕರ್ (38), ವೇಣು (20) ಹಾಗೂ ನಾಗವೇಣಿ (45) ಎಂದು ಗುರುತಿಸಲಾಗಿದೆ. ಮೃತರು ಚಳ್ಳಕೆರೆ ತಾಲೂಕಿನ ಕರಿಕೆರೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಕಾರು ಚಳ್ಳಕೆರೆಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿತ್ತು. ಇನ್ನೂ ಲಾರಿ ಹಿರಿಯೂರು ಕಡೆಯಿಂದ ಬರುತ್ತಿತ್ತು. ಆದರೆ ಬಾಲೇನಹಳ್ಳಿ ಸಮೀಪದಲ್ಲಿ ಕಾರು ವೇಗವಾಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ವಿಶಾಲಾಕ್ಷಮ್ಮನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
