– ತಾತ್ಕಾಲಿಕವಾಗಿ ಪೀಣ್ಯ ಫ್ಲೈಓವರ್ ಬಂದ್
ಬೆಂಗಳೂರು: ಫ್ಲೈಓವರ್ ಮೇಲೆ ಲಾರಿಯೊಂದು (Lorry) ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ (Bengaluru) ಪೀಣ್ಯದಲ್ಲಿ ನಡೆದಿದೆ.
ಗುರುವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೂಡಲೇ ಲಾರಿಯಿಂದ ಕೆಳಗಿಳಿದಿದ್ದಾರೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆ ನಗರದ ಕಡೆಗೆ ಕೆಲಗಂಟೆಗಳ ಕಾಲ ಪೀಣ್ಯ ಫ್ಲೈಓವರ್ (Peenya Flyover) ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ನಗರದ ಕಡೆಗೆ ಬರುವವರು ಫ್ಲೈಓವರ್ ಕೆಳಗಡೆ ಬರುವಂತೆ ಸೂಚನೆ ನೀಡಲಾಗಿತ್ತು. ಇದನ್ನೂ ಓದಿ: ಬಿಜೆಪಿ ನೂತನ ರಾಷ್ಟ್ರಾಧ್ಯಕರ ಆಯ್ಕೆ ಪ್ರಕ್ರಿಯೆ ಚುರುಕು – ಶೀಘ್ರದಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲೂ ಅಧ್ಯಕ್ಷರ ಬದಲಾವಣೆ?
ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ನಾವು ಹಿಂದೂಗಳಿಗಿಂತ ವಿಭಿನ್ನ – ಎರಡು ರಾಷ್ಟ್ರ ಥಿಯರಿ ಹೇಳಿ ಪಾಠ ಮಾಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ