ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬಾಲೇಪುರ ಗ್ರಾಮದಲ್ಲಿ ನಡೆದಿದೆ.
ಬೆಟ್ಟಕೋಟೆ ನಿವಾಸಿ ಶಿವಪ್ರಸಾದ್ (35) ಮೃತ ವ್ಯಕ್ತಿ. ಶಿವ ಪ್ರಸಾದ್ ಕರ್ನಾಟಕ ರಕ್ಷಣಾ ವೇದಿಕೆಯ ದೇವನಹಳ್ಳಿಯ ತಾಲೂಕಿನ ಅಧ್ಯಕ್ಷರಾಗಿದ್ದರು.
ಬದಿಯಲ್ಲಿ ಎಳೆನೀರು ಕುಡಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಲಾರಿ ಡಿಕ್ಕಿಯಾದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ದೇಹ ಎರಡು ಭಾಗವಾಗಿದ್ದು, ಬಳಿಕ ಲಾರಿ ಸಮೇತ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ವ್ಯಕ್ತಿ ಸಾವು
ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಳಿಕ ಅದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಪಿ. ಟಿ ಉಷಾ ವಿರುದ್ಧ ವಂಚನೆ ದೂರು ದಾಖಲು