ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬ ಗಂಭೀರ

Public TV
1 Min Read
Lorry accident shoolagiri

ಬೆಂಗಳೂರು: ಬ್ರೇಕ್ ಫೇಲಾದ (Brake Failure) ಲಾರಿಯೊಂದು (Lorry) ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ತಮಿಳುನಾಡು ಗಡಿ ಪ್ರದೇಶವಾದ ಸೂಳಗಿರಿ (Shoolagiri) ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಆನೇಕಲ್ (Anekal) ತಾಲೂಕಿನ ರಾಚಮಾನಹಳ್ಳಿ ನಿವಾಸಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂಳಗಿರಿ ಸಮೀಪ ಇಂದು (ಸೋಮವಾರ) ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಇಬ್ಬರು ಹೋಂಡಾ ಆಕ್ಟಿವಾ ವಾಹನದಲ್ಲಿ ಚಲಿಸುತ್ತಿದ್ದರು. ಇದೆ ವೇಳೆ ತಮಿಳುನಾಡಿನ ಲಾರಿ ಒಂದು ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಲ್ಲಿ ಕೋಲಾರಕ್ಕೆ ನೂರರಷ್ಟು ನೀರು ಸಿಗಲಿದೆ: ಮುನಿಯಪ್ಪ ವಿಶ್ವಾಸ

ಡಿಕ್ಕಿ ರಭಸಕ್ಕೆ ಶ್ರೀನಿವಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶ್ರೀನಿವಾಸ್ ದೇವಸ್ಥಾನದಲ್ಲಿ ಪೂಜೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಮೃತರಿಗೆ ಆರು ವರ್ಷದ ಹೆಣ್ಣು ಮಗು ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ವಾಹನ ಚಾಲಕನನ್ನು ಸೂಳಗಿರಿ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ದೈತ್ಯಾಕಾರದ ಒಂಟಿಸಲಗ: ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ

Share This Article