– 30ಕ್ಕೂ ಹೆಚ್ಚು ಪ್ರಯಾಣಿಕರು ಪಾರು
ಚಿತ್ರದುರ್ಗ: ಡಿವೈಡರ್ ದಾಟಿ ಬಂದ ಲಾರಿಯೊಂದು (Lorry) ಖಾಸಗಿ ಬಸ್‌ಗೆ (Private Bus) ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಚಿಕ್ಕಮ್ಮನಹಳ್ಳಿ ಬಳಿ ನಡೆದಿದೆ.
ಸಿಂಧನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿದೆ. ಹೀಗಾಗಿ ಖಾಸಗಿ ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಪಕ್ಷದಿಂದ ಉಚ್ಚಾಟನೆ
ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರೆಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಳಕು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಹಠ ಮಾಡಿ ರೈತರಿಗೆ ನೋವು ಕೊಡಬೇಡಿ, ಟೌನ್‌ಶಿಪ್ ಕೈಬಿಡಿ: ಸೋಮಣ್ಣ
