ಬೀದರ್: ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ (Lorry) ಹರಿದು ವಿದ್ಯಾರ್ಥಿ (Student) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಗ್ರಾಮದಲ್ಲಿ ನಡೆದಿದೆ.
ವಿನೋದ್ ಅತಿವಾಳ (18) ಸಾವನ್ನಪ್ಪಿದ ದುರ್ವೈವಿ ವಿದ್ಯಾರ್ಥಿ. ವಿನೋದ್ ಶಾಲಾ ಸಾಮಗ್ರಿಗಳನ್ನು ತರಲು ಸೈಕಲ್ ಮೇಲೆ ಹೋಗುತ್ತಿದ್ದ. ಈ ವೇಳೆ ಕಲ್ಲು ತುಂಬಿದ ಲಾರಿ ವಿದ್ಯಾರ್ಥಿ ವಿನೋದ್ ಮೇಲೆ ಹರಿದಿದೆ. ಇದರ ಪರಿಣಾಮ ವಿನೋದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: BMTC ಬಸ್ ಟಯರ್ ಅಡಿಗೆ ಬಿದ್ದು ಬೈಕ್ ಸವಾರ ಸಾವು
ಘಟನೆಗೆ ಸಂಬಂಧಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕಿಡಿಕಾರಿದರು. ಈ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ತಂದೆಯನ್ನ ಕೊಂದು 20 ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ