ಹಾವೇರಿ: ಏಕಾಏಕಿ ಎದೆನೋವು ಕಾಣಿಸಿಕೊಂಡು, ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾವೇರಿಯ (Haveri) ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ.
ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕ (Lorry driver) ಎಂದು ಗುರುತಿಸಲಾಗಿದೆ. ಚಾಲಕನನ್ನು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿ ಎನ್ನಲಾಗಿದೆ. ಇದನ್ನೂ ಓದಿ: ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ
ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ರವಾನೆಗೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಲಾರಿ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.