ಹೈದರಾಬಾದ್: ಗದ್ದೆ ಕೆಲಸಕ್ಕೆ ಜನರನ್ನು ಹೊತ್ತು ಹೋಗುತ್ತಿದ್ದ ಟೆಂಪೊಕ್ಕೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಭದ್ರಾದ್ರಿಯಲ್ಲಿ ನಡೆದಿದೆ.
ಮೃತ ಮಹಿಳೆಯರನ್ನ ಕತಿ ಸ್ವಾತಿ, ಸಾಯಮ್ಮ, ಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಮಹಿಳೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇವರೆಲ್ಲರೂ ಕೊತಗುಡೆಂ ಸಮೀಪದ ಸುಜಾತನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರು ಸಾತುಪಲ್ಲಿ ಗ್ರಾಮಕ್ಕೆ ಭತ್ತದ ಗದ್ದೆ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್ ಮಾಡಿದ ವಧು
ಭದ್ರಾದ್ರಿಯ ಕೊತಗುಡೆಂ ಜಿಲ್ಲೆಯ ತಿಪ್ಪನಪಲ್ಲಿಯಲ್ಲಿ ಈ ದುರ್ಘಟನೆ ನಡೆದಿದ್ದು, ಕಲ್ಲಿದ್ದಲು ತುಂಬಿಕೊಂಡು ಹೋಗುತ್ತಿದ್ದ ಲಾರಿ, ಟೆಂಪೊವಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ 12 ಜನರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 8 ಸದಸ್ಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ