ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumakuru-Bengaluru Highway) ಕ್ಲೋರೈಡ್ ಕೆಮಿಕಲ್ (Chloride Chemical) ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ (Nelamangala) ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.
ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನೂ ಅಪಾಯಕಾರಿ ಕ್ಲೋರೈಡ್ ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಲಾರಿ ತೆರವಿಗೆ ಕಾರ್ಯಚರಣೆ ಆರಂಭಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪದಡಿ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನಕ್ಕೆ ಕೋರ್ಟ್ ಆದೇಶ

ಇನ್ನೂ ಘಟನೆಯಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಭಯದಿಂದ ವಾಹನ ಸವಾರರು ಸಂಚಾರ ಮಾಡುವಂತಾಗಿದೆ. ಇದನ್ನೂ ಓದಿ: ಮತ್ತೆ ಮಳೆ ಚುರುಕು – ಚಿಕ್ಕೋಡಿ ವ್ಯಾಪ್ತಿಯ 6 ಸೇತುವೆ ಮುಳುಗಡೆ
