ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು (Lorry) ಹೇಮಾವತಿ ನಾಲೆಗೆ (Hemavathi Canal) ಬಿದ್ದ ಪರಿಣಾಮ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಕುಣಿಗಲ್ (Kunigal) ತಾಲೂಕಿನ ಕುರುಡಿಹಳ್ಳಿ ಬಳಿ ನಡೆದಿದೆ.
ಲಾರಿ ತುಮಕೂರಿನಿಂದ ಕುಣಿಗಲ್ ಕಡೆಗೆ ಅಕ್ಕಿ ಮೂಟೆ ತುಂಬಿಕೊಂಡು ಹೋಗುತ್ತಿತ್ತು. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಡಿವೈಡರ್‌ಗೆ ಡಿಕ್ಕಿಯಾಗಿ ಪಕ್ಕದಲ್ಲಿದ್ದ ಹೇಮಾವತಿ ನಾಲೆಗೆ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ಅಕ್ಕಿ ಮೂಟೆಗಳು ಚೆಲ್ಲಾಪಿಲ್ಲಿಯಾಗಿವೆ. ಇದನ್ನೂ ಓದಿ: 100 ದಿನಗಳ ಸಂಭ್ರಮ| ಬಲಿಷ್ಠ ಕರ್ನಾಟಕಕ್ಕೆ 3 ಮಹಾ ಸಂಕಲ್ಪ, 9 ಸಂಕಲ್ಪ ಕೈಗೊಂಡ ಡಿಕೆಶಿ
ಘಟನೆಯಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿ ಸಿಲುಕಿದ್ದ ಚಾಲಕನನ್ನ ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಟ್ಟಿದ್ದು, ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಕ್ಕಳ ಅಪಹರಣ ಪ್ರಕರಣಗಳ ತನಿಖೆಗೆ ಏಕರೂಪ ವ್ಯವಸ್ಥೆ – ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

