– ಕ್ಲೀನರ್ ಕಾಲು ಕಟ್
ಹಾಸನ: ಚಲಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ಶಿರಾಡಿಘಾಟ್ ರಸ್ತೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಉರುಳಿಬಿದ್ದಿದೆ. ಬಿದ್ದ ರಭಸಕ್ಕೆ ಒಂದಷ್ಟು ಮಣ್ಣು ಲಾರಿ ಮೇಲೆ ಕುಸಿದಿದೆ. ಪರಿಣಾಮ ಚಾಲಕ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ.
ಲಾರಿ ಕ್ಲೀನರ್‍ನ ಕಾಲು ಕಟ್ ಆಗಿದೆ. ಮಣ್ಣಿನಡಿ ಸಿಲುಕಿರುವ ಚಾಲಕನ ರಕ್ಷಣಾ ಕಾರ್ಯ ಸಾಗಿದೆ. ಅಪಘಾತದಲ್ಲಿ ಗಾಯಗೊಂಡ ಕ್ಲೀನರ್ ನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಯಲ್ಲಿ ವೈದ್ಯೆ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ