ಮಂಗಳೂರು: ಓಮ್ನಿ ಮೇಲೆ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಎಂಬಲ್ಲಿ ನಡೆದಿದೆ.
ಮೃತನನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಲಾರಿಯು ಉಡುಪಿ ಕಡೆಗೆ ಗೋಣಿ ಚೀಲಗಳನ್ನು ಹೊತ್ತು ಸಾಗುತ್ತಿತ್ತು. ಬ್ರೇಕ್ ಹಾಕಿದಾಗ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ರಸ್ತೆಯಲ್ಲಿ ಲಾರಿ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಪರಿಣಾಮ ರಸ್ತೆ ಪಕ್ಕದಲ್ಲೇ ನಿಂತಿದ್ದ ಓಮ್ನಿ ಮೇಲೆ ಮಗುಚಿ ಬಿದ್ದಿದೆ.
ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಲೋಕೇಶ್ ಚಿಕಿತ್ಸೆ ಫಲಕಾರಿಯಾಗದೇ ಲೋಕೇಶ್ ಮೃತಪಟ್ಟಿದ್ದಾರೆ.
ಘಟನೆ ಸಂಬಂದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13 ಜಿಲ್ಲೆಗಳಲ್ಲಿ ಮಳೆ ಹಾನಿ, ಈವರೆಗೂ 12 ಜನ, 62 ಜಾನುವಾರುಗಳು ಸಾವು: ಬೊಮ್ಮಾಯಿ