ಚಿತ್ರದುರ್ಗ: ಸರಕು ಸಾಗಣೆ ಲಾರಿಯ ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿಯ ಟೈರ್‍ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಾರಿ ಭಾಗಶಃ ಸುಟ್ಟು ಭಸ್ಮವಾಗಿದೆ. ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ ಚಾಲಕ ಲಾರಿ ಬಿಟ್ಟು ಇಳಿದಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.