Connect with us

ಚಿತ್ರದುರ್ಗ: ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಸರಕು ಸಾಗಣೆ ಲಾರಿ

ಚಿತ್ರದುರ್ಗ: ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಸರಕು ಸಾಗಣೆ ಲಾರಿ

ಚಿತ್ರದುರ್ಗ: ಸರಕು ಸಾಗಣೆ ಲಾರಿಯ ಟೈರ್‍ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿಯ ಟೈರ್‍ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಾರಿ ಭಾಗಶಃ ಸುಟ್ಟು ಭಸ್ಮವಾಗಿದೆ. ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿ ಚಾಲಕ ಲಾರಿ ಬಿಟ್ಟು ಇಳಿದಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Advertisement
Advertisement