ಮಡಿಕೇರಿ: ವಾಯುವಿಹಾರಕ್ಕೆ ತೆರಳಿದ ಪಾದಚಾರಿಯ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗದ್ದೆಹಳ್ಳ ಬಳಿ ನಡೆದಿದೆ.
Advertisement
ಇಂದು ಬೆಳಿಗ್ಗೆ ಮೈಸೂರು ಕಡೆಯಿಂದ ಟಿವಿಎಸ್ ದ್ವಿಚಕ್ರ ವಾಹನ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಮೇಲೆ ಮಗುಚಿ ಬಿದ್ದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇದನ್ನೂ ಓದಿ:ಅಕ್ರಮ ಕಟ್ಟಡ ನಿರ್ಮಾಣ ಸರ್ಕಾರದ ವಶಕ್ಕೆ ಪಡೆಯಲು ಅರ್ಜಿ ಸಲ್ಲಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ
Advertisement
Advertisement
ಹಾಸನದ ರಾಮನಾಥಪುರದ ದಿಲ್ ಶಾದ್ (53) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದ್ದು. ಮಹಿಳೆ ನಿಂತಿದ್ದ ಜಾಗದಲ್ಲೇ ಲಾರಿ ಮಗುಚಿ ಬಿದ್ದ ಪರಿಣಾಮ ಮಹಿಳೆ ಗುರುತು ಸಿಗದಷ್ಟರ ಮಟ್ಟಿಗೆ ಮೃತ ದೇಹ ನಜ್ಜುಗುಜ್ಜಾಗಿದೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಈ ಕುರಿತಂತೆ ಸುಂಟಿಕೊಪ್ಪ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ