ದುನಿಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಲೂಸ್ ಮಾದ ಯೋಗಿ (Loose Mada Yogeesh) ಇದೀಗ ಐವತ್ತನೇ ಸಿನಿಮಾ ಪೂರೈಸಿದ್ದಾರೆ. ಮೊನ್ನೆಯಷ್ಟೇ ಅವರ 50ನೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಈ ಚಿತ್ರಕ್ಕೆ ರೋಸಿ ಎಂದು ಹೆಸರಿಡಲಾಗಿತ್ತು. ಆದರೆ, ಈ ಟೈಟಲ್ ಸಿಗುವುದು ಬಹುತೇಕ ಕಷ್ಟ ಎನ್ನಲಾಗುತ್ತಿದೆ. ಇದೇ ಹೆಸರಿನಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿದ್ದು, ಅವರು ಚಿತ್ರದ ಟೈಟಲ್ ಅನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ.
Advertisement
ಅರ್ಜುನ್ ಜನ್ಯ (Arjun Janya) ಚೊಚ್ಚಲ ನಿರ್ದೇಶನದ, ಸೂರಜ್ ಪ್ರೊಡಕ್ಷನ್ಸ್ ಲಾಂಛನದ ಮೂಲಕ ‘ರೋಸಿ 45’ (Rosy 45) ಶೀರ್ಷಿಕೆಯನ್ನು ನೋಂದಾಯಿಸಲಾಗಿತ್ತು. ಈಗ ಯೋಗಿ ನಟನೆಯ ಡಿ.ವೈ.ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೂ ‘ರೋಸಿ’ ಎಂದು ಶೀರ್ಷಿಕೆ ಇಡಲಾಗಿತ್ತು. ಈ ವಿಷಯವನ್ನು ಕರ್ನಾಟಕ ವಾಣಿಜ್ಯ ಮಂಡಳಿ ಗಮನಕ್ಕೆ ತರಲಾಗಿತ್ತು. ಇದನ್ನೂ ಓದಿ: ನಟ ಚೇತನ್ ಭಾರತದ ವೀಸಾ ರದ್ದು
Advertisement
Advertisement
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮೊದಲು ಶೀರ್ಷಿಕೆ ನೋಂದಾಯಿಸಿದವರು ಮಾತ್ರ ಶೀರ್ಷಿಕೆ ಬಳಸಿಕೊಳ್ಳಬಹುದು ಎಂದು ವಾಣಿಜ್ಯ ಮಂಡಳಿ ಹೇಳಿದೆ. ಹಾಗಾಗಿ ಸೂರಜ್ ಪ್ರೊಡಕ್ಷನ್ಸ್ ಗೆ ರೋಸಿ 45(Rosy 45) ಶೀರ್ಷಿಕೆ ಸೇರಿದೆ.
Advertisement
ಇನ್ನು ಮುಂದೆ ಯಾರು ಕೂಡ ‘ರೋಸಿ’ ಶೀರ್ಷಿಕೆ ಬಳಸುವ ಹಾಗಿಲ್ಲ ಹಾಗೂ ಶೀರ್ಷಿಕೆ ಪಕ್ಕದಲ್ಲಿ ಬೇರೆ ಪದ ಹಾಗೂ ನಂಬರ್ ಗಳನ್ನಾಗಲಿ ಸೇರಿಸಿಕೊಂಡು ಸಹ ಬಳಸುವ ಹಾಗಿಲ್ಲ ಎಂದು ರೋಸಿ 45 ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಹಾಗೂ ನಿರ್ದೇಶಕ ಅರ್ಜುನ್ ಜನ್ಯ ತಿಳಿಸಿದ್ದಾರೆ.