ಕಾರವಾರ: ಷೇರು ಮಾರುಕಟ್ಟೆಯಲ್ಲಿ (Stock Market) ಲಕ್ಷಾಂತರ ರೂಪಾಯಿ ಹಣ ಹೂಡಿಕೆ ಮಾಡಿ ಕಳೆದುಕೊಂಡ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಉತ್ತರಕನ್ನಡ (Uttarakannada) ಜಿಲ್ಲೆಯ ಸಿದ್ದಾಪುರದಲ್ಲಿ (Siddapura) ನಡೆದಿದೆ.
ನಗರದ ನಿವಾಸಿ ಹರ್ಷವರ್ಧನ್ (22) ನೇಣಿಗೆ ಶರಣಾದ ಯುವಕ. ಈತ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದ. ಹೀಗೆ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ. ಇದರಿಂದ ಬೇಸತ್ತು ಮನೆಯಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಲಾಸ್ – ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಈ ಸಂಬಂಧ ಹರ್ಷವರ್ಧನ್ ತಂದೆ ಚಂದ್ರಶೇಖರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬಜೆಟ್ ಎಫೆಕ್ಟ್ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್ ಭಾರೀ ಏರಿಕೆ



