Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ

Bengaluru City

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ

Public TV
Last updated: February 6, 2026 9:00 pm
Public TV
Share
2 Min Read
Bengaluru International Film Festival
SHARE

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು (Bengaluru International Film Festival) ಇಂದು (ಫೆ.6) ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʻಲಾಸ್ಟ್‌ ಲ್ಯಾಂಡ್‌ʼ (Lost Land), ಮರಾಠಿಯ ʻಸಬರ್‌ ಬೊಂದಾʼ ಮತ್ತು ʻವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು (Best Film Award) ತನ್ನದಾಗಿಸಿಕೊಂಡಿವೆ.

ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು ಲಕ್ಷ ರೂ. ನೀಡಿ ಗೌರವಿಸಲಾಯಿತು.

Bengaluru International Film Festival 1

ಏಷ್ಯನ್‌ ಚಿತ್ರ ವಿಭಾಗದಲ್ಲಿ ಈ ವರ್ಷ ಒಟ್ಟು 15 ಚಿತ್ರಗಳು ಪ್ರಶಸ್ತಿ ಕಣದಲ್ಲಿದ್ದವು. ಈ ಪೈಕಿ ಜಪಾನ್‌ನ ʻದಿ ಲಾಸ್ಟ್‌ ಲ್ಯಾಂಡ್‌ʼ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾದರೆ, ಭಾರತದ ʻಶೇಪ್‌ ಆಫ್‌ ಮೋಮೋʼ ಮತ್ತು ಜಪಾನ್‌ನ ʼದಿ ಡೀಪೆಸ್ಟ್‌ ಸ್ಪೇಸ್‌ ಇನ್‌ ಯೂಎಸ್‌ʼ ಚಿತ್ರಗಳು ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗೆ ಭಾಜನವಾಗಿವೆ. ಫಿಲಿಪೈನ್ಸ್‌ನ ʻರಿಪಬ್ಲಿಕ್‌ ಆಫ್‌ ಪಿಪೊಲಿಪಿನಾಸ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಭಾರತೀಯ (ಚಿತ್ರಭಾರತಿ) ವಿಭಾಗದಲ್ಲಿ ಮರಾಠಿ ಚಿತ್ರ ʻಸಬರ್‌ ಬೊಂಡಾʼ ಅತ್ಯುತ್ತಮ ಚಿತ್ರ ಪ್ರಶಸ್ತಿ ತನ್ನದಾಗಿಸಿಕೊಂಡರೆ, ಮಲಯಾಳಂನ ʻಮೋಹಂʼ ಮತ್ತು ʻಕಾಡುʼ ಚಿತ್ರಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗಳನ್ನು ಗೆದ್ದಿವೆ. ಮರಾಠಿ ಭಾಷೆಯ ʻಗೊಂದಾಳ್‌ʼ ಚಿತ್ರವು ಫಿಪ್ರೆಸ್ಕಿ ಪ್ರಶಸ್ತಿ ಪಡೆದರೆ, ಮಲಯಾಳಂ ಭಾಷೆಯ ʻಸರ್ಕೀಟ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ 14 ಚಿತ್ರಗಳು ಸ್ಪರ್ಧಿಸಿದ್ದು, ಈ ಪೈಕಿ ʻವನ್ಯಾʼ ಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದೆ. ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರಗಳಾಗಿ ʻನಮ್‌ ಸಾಲಿʼ ಮತ್ತು ʻರಾವಣ ರಾಜ್ಯದಲ್ಲಿ ನವದಂಪತಿಗಳುʼ ಆಯ್ಕೆಯಾದರೆ, ʻಹಕ್ಕಿಗಾಗಿʼ ಚಿತ್ರಕ್ಕಾಗಿ ನೆಟ್‌ಪ್ಯಾಕ್‌ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ʻಮೃಗತೃಷ್ಣʼ ಮತ್ತು ʻಫೋರ್‌ ಬೈ ಫೋರ್‌ʼ ಚಿತ್ರಗಳು ತೀರ್ಪುಗಾರರ ವಿಶೇಷ ಮನ್ನಣೆಗೆ ಭಾಜನವಾಗಿವೆ.

ಈ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಚಲನಚಿತ್ರಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.

TAGGED:Bengaluru International Film FestivalBest Film AwardLost Land
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
14 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
17 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
22 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
24 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
36 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?