ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮಾಡುವ ಕೆಲಸಗಳು ಸಾಕಷ್ಟಿವೆ. ಮತ್ತೆ ಭಾರತೀಯ ಕುಸ್ತಿ ಫೆಡರೇಷನ್ (WFI) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಕುಸ್ತಿ ಫೆಡರೇಷನ್‌ನಿಂದ ‘ಸನ್ಯಾಸತ್ವ’ ಸ್ವೀಕರಿಸಿರುವುದಾಗಿ ಘೋಷಿಸಿದ್ದಾರೆ. ಕ್ರೀಡಾ ಸಚಿವಾಲಯ ನೂತನ ಕುಸ್ತಿ ಫೆಡರೇಷನ್ ಸಮಿತಿಯನ್ನೇ ಅಮಾನತುಗೊಳಿಸಿದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನೂತನ ಕುಸ್ತಿ ಫೆಡರೇಶನ್ ಸಮಿತಿಯನ್ನೇ ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ
ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಬ್ರಿಜ್ ಭೂಷಣ್ ಈ ಸೂಚನೆ ಕೊಟ್ಟಿದ್ದಾರೆ. ಬ್ರಿಜ್ ಭೂಷಣ್ ಅವರು ಕುಸ್ತಿಯಿಂದ ಸನ್ಯಾಸತ್ವ ಅಥವಾ ನಿವೃತ್ತಿ ತೆಗೆದುಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸಿದ್ದಾರೆ.
ಜೆ.ಪಿ.ನಡ್ಡಾ ಅವರೊಂದಿಗಿನ ಸಂಭಾಷಣೆಯಲ್ಲಿ ಡಬ್ಲ್ಯುಎಫ್‌ಐ ಬಗ್ಗೆ ಮಾತನಾಡಿಲ್ಲ. ತಾವು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವರದಿಗಳನ್ನು ಬ್ರಿಜ್ ಭೂಷಣ್ ಸಿಂಗ್ ನಿರಾಕರಿಸಿದ್ದಾರೆ. ಇದನ್ನೂ ಓದಿ: ಬಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್
ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಬೀದಿಗಿಳಿದ ಪ್ರತಿಭಟಿಸಿದ ನಂತರ ಬ್ರಿಜ್ ಭೂಷಣ್, WFI ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಆ ಸ್ಥಾನಕ್ಕೆ ತಮ್ಮ (ಬ್ರಿಜ್ ಭೂಷಣ್) ಆಪ್ತರೇ ಆಯ್ಕೆಯಾಗುವಂತೆ ಮಾಡಿದ್ದಕ್ಕೆ, ಮತ್ತೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದರು. ಸಾಕ್ಷಿ ಮಲಿಕ್ ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ್ದಾರೆ. ಬಜರಂಗ್ ಪುನಿಯಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.