ಚಿಕ್ಕಬಳ್ಳಾಪುರ: ಹೊಸ ವರ್ಷದ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದು ಬಂದಿದೆ.
ನಂದಿಗಿರಿಧಾಮದ ಸೌಂದರ್ಯ ಕಣ್ತುಂಬಿಕೊಳ್ಳೋಕೆ ಅಂತ ಪ್ರವಾಸಿಗರು ನಾ ಮುಂದು ತಾ ಮುಂದು ಮುಗಿಬಿದ್ದಿದ್ದಾರೆ. ಬೆಳಗ್ಗೆ 8 ಗಂಟೆಯವರೆಗೂ ಪ್ರವಾಸಿಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿಷೇಧ ಹೇರಿತ್ತಾದರೂ ಪ್ರವಾಸಿಗರ ಒತ್ತಡದ ಹಿನ್ನೆಲೆಯಲ್ಲಿ 6 ಗಂಟೆ 30 ನಿಮಿಷಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ಹೊಸ ವರ್ಷದ ಅಮಲಿನಲ್ಲಿ ಕಾರ್, ಬೈಕ್ ಡಿಕ್ಕಿ- ನಂದಿಬೆಟ್ಟದಲ್ಲಿ ವಾಹನ ಬಿಟ್ಟು ಪರಾರಿ
Advertisement
Advertisement
ಮಧ್ಯ ರಾತ್ರಿಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಸಾವಿರಾರು ಮಂದಿ ಪ್ರವಾಸಿಗರು ಕಾದು ಕುಳಿತ್ತಿದ್ದು, ಬೆಳ್ಳಂ ಬೆಳಗ್ಗೆ ವಾಹನಗಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕೊಡಲೇ ಬೈಕ್ ಸವಾರರು ಕಾರು ಸವಾರರು ನಾ ಮುಂದು ತಾ ಮುಂದು ಅಂತ ನಂದಿಬೆಟ್ಟ ಏರಿದ್ದಾರೆ.
Advertisement
ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲು ಸಾಲಾಗಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv