ಚಾಮರಾಜನಗರ: ತಡ ರಾತ್ರಿ ಭಾರಿ ಪ್ರಮಾಣದ ಶಬ್ದದಿಂದ ಸುಮಾರು 10 ರಿಂದ 11 ಮನೆಗಳಿಗೆ ಹಾನಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿಂಗಲ್ಲನೂರು ಗ್ರಾಮದಲ್ಲಿ ನಡೆದಿದೆ.
Advertisement
ಮಧ್ಯರಾತ್ರಿ 2.30ರ ಸುಮಾರಿಗೆ ಕೇಳಿ ಬಂದ ಶಬ್ದ ಜನರ ನಿದ್ದೆಗೆಡಿಸಿದೆ. ಪರಿಣಾಮ ನಿದ್ದೆಯಲ್ಲಿದ್ದ ಜನರೆಲ್ಲರೂ ಮನೆಯಿಂದ ಹೊರ ಬಂದಿದ್ದಾರೆ. ಮಹದೇವಮ್ಮ, ಶೈಲಪ್ಪ, ಸೋಮಣ್ಣ, ಸಿದ್ದರಾಜು, ಸುರೇಶ್ ಸೇರಿದಂತೆ ಹಲವರ ಮನೆಗಳು ಹಾನಿಗೊಳಗಾಗಿವೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ
Advertisement
Advertisement
ಸಿದ್ದರಾಜು ಅವರ ಮನೆಯು ಸಂಪೂರ್ಣ ಜಖಂಗೊಂಡಿದೆ. ಸಿದ್ದರಾಜು ಮನೆಯಲ್ಲಿ ವಾಸವಿದ್ದ ರತ್ಮಮ್ಮ ಎಂಬುವರಿಗೆ ಕೈಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಚಾರ ತಿಳಿದ ಶಾಸಕ ಆರ್.ನರೇಂದ್ರ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಿಗೊಳಗಾದ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವಘಡಕ್ಕೆ ಕಾರಣ ಏನು ಎಂಬುದರ ವರದಿಯನ್ನು ತ್ವರಿತವಾಗಿ ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ